ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ : ನದಿ ಪಾತ್ರಗಳಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣ - Rain latest news
🎬 Watch Now: Feature Video

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದೆ. ಜಿಲ್ಲೆಯ ಗಂಗಾವಳಿ, ಅಘನಾಶಿನಿ, ಕಾಳಿ ನದಿಗಳು ಉಕ್ಕಿ ಹರಿಯುತ್ತಿದ್ದು ನದಿ ಪಾತ್ರಗಳಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಪ್ರಮುಖ ನದಿಗಳಿಗೆ ಯಥೇಚ್ಛವಾಗಿ ನೀರು ಹರಿದುಬರುತ್ತಿದ್ದು, ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಅಂಕೋಲಾದಲ್ಲಿ ಗಂಗಾವಳಿ ನದಿ ಉಕ್ಕಿ ಹರಿದ ಪರಿಣಾಮ ಇಲ್ಲಿನ ಶಿರೂರು, ಕಲ್ಲೇಶ್ವರ, ಅಳವಳ್ಳಿ ಗುಳ್ಳಾಪುರ, ರಾಮನಗುಳಿ, ಡೊಂಗ್ರಿ ಗ್ರಾಮಗಳ ಮನೆ ಜಮೀನುಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಮಾತ್ರವಲ್ಲದೆ ನಿನ್ನೆ ನೆರೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬೈಕ್ ಸವಾರ ಇಂದು ಶವವಾಗಿ ಪತ್ತೆಯಾಗಿದ್ದಾನೆ. ಈಗಾಗಲೇ ತೊಂದರೆಗೆ ಸಿಲುಕಿದವರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ.