ಕೊಡಗಿನಲ್ಲಿ ಧಾರಾಕಾರ ಮಳೆ: ಗರಿಗೆದರಿದ ಕೃಷಿ ಚಟುವಟಿಕೆ! - Heavy rain'
🎬 Watch Now: Feature Video
ಕೊಡಗು: ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಭಾಗಮಂಡಲ, ತಲಕಾವೇರಿ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಇದರಿಂದ ಕಾವೇರಿ ನದಿಯಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ. ಭ್ರಹ್ಮಗಿರಿ, ಪುಷ್ಪಗಿರಿ ಹಾಗೂ ನಾಪೋಕ್ಲು, ಮಡಿಕೇರಿ ಸುತ್ತಮುತ್ತ ಭಾರೀ ಮಳೆ ಸುರಿಯುತ್ತಿದೆ. ನಿನ್ನೆ ಕೊಂಚ ಬಿಡುವು ಕೊಟ್ಟಿದ್ದ ಮಳೆ, ಮಧ್ಯಾಹ್ನದ ಬಳಿಕ ಬಿರುಸು ಪಡೆದುಕೊಂಡಿದೆ. ಹಾಗೆಯೇ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ರೈತರಲ್ಲೂ ಉತ್ಸಾಹ ಮೂಡಿದೆ.