ಮುಂದುವರಿದ 'ಮಹಾ' ಮಳೆ: ಯಕ್ಸಂಬಾ-ದಾನವಾಡ ಸೇತುವೆ ಮುಳುಗಡೆ - ಬೆಳಗಾವಿ ಪ್ರವಾಹ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4391717-thumbnail-3x2-rain.jpg)
ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ದೂಧಗಂಗಾ ನದಿಗೆ ಅಡ್ಡಲಾಗಿರುವ ಯಕ್ಸಂಬಾ - ದಾನವಾಡ ಸೇತುವೆ ಮುಳುಗಡೆಯಾಗಿದೆ. ಯಕ್ಸಂಬಾ ಹಾಗೂ ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ಜಿಲ್ಲೆಯ ದಾನವಾಡ ನಡುವೆ ಸಂಪರ್ಕ ಕಡಿತವಾಗಿದೆ. ಇನ್ನು ಮಹಾ ಮಳೆಗೆ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಕೃಷ್ಣಾ, ದೂಧಗಂಗಾ, ವೇದಗಂಗಾ ನದಿ ತೀರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ.