ಮಲೆನಾಡಿನಲ್ಲಿ ಮುಂದುವರೆದ ವರುಣನ ಅರ್ಭಟ.. ಜನ ಜೀವನ ಅಸ್ತವ್ಯಸ್ತ.. - ಚಿಕ್ಕಮಗಳೂರು ಮಳೆ ಸುದ್ದಿ
🎬 Watch Now: Feature Video

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೆ ಧಾರಾಕಾರ ಮಳೆ ಆಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಮೂಡಿಗೆರೆ ತಾಲೂಕಿನ ಬಣಕಲ್, ಕೊಟ್ಟಿಗೆಹಾರ, ಜಾವಳಿ,ದುರ್ಗದಹಳ್ಳಿ ಸೇರಿ ಸುತ್ತಮುತ್ತಲಿನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮಲೆನಾಡಿನ ಹಲವು ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಶಾಲಾ ಕಾಲೇಜಿಗೆ ಹೋಗುವ ಮಕ್ಕಳು ಪರದಾಟ ನಡೆಸಿದ್ದಾರೆ. ನದಿಗಳ ಹರಿವಿನ ಮಟ್ಟದಲ್ಲೂ ಹೆಚ್ಚಳವಾಗಿದೆ. ಜಿಲ್ಲೆಯ ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಮಲೆನಾಡಿನ ಭಾಗದಲ್ಲಿ ಆತಂಕ ಆವರಿಸಿದೆ.