ರಾಯಚೂರು : ಭಾರೀ ಮಳೆಗೆ ನಾಶವಾಗುತ್ತಿರುವ ಬೆಳೆಗಳು! - crops washed awasy for rain
🎬 Watch Now: Feature Video
ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಹಳ್ಳ-ಕೊಳ್ಳಗಳು ನೀರಿನಿಂದ ಉಕ್ಕಿ ಹರಿಯುತ್ತಿವೆ. ರಾಯಚೂರು ತಾಲೂಕಿನ ಜೆಗರಕಲ್ ಗ್ರಾಮದ ಹೊರವಲಯದ ಹಳ್ಳದಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಗ್ರಾಮಕ್ಕೆ ಸಂಪರ್ಕ ಬಂದ್ ಆಗಿದೆ. ಹಳ್ಳದ ಪಕ್ಕದಲ್ಲಿ ರೈತರ ಹೊಲಗಳಿಗೆ ನೀರು ನುಗ್ಗಿ ಬೆಳೆದು ನಿಂತಿರುವ ಹತ್ತಿ, ತೊಗರಿ ಬೆಳೆ ನಾಶವಾಗುತ್ತಿದೆ. ನೀರಿಗೆ ಬೆಳೆಗಳು ಕೊಚ್ಚಿ ಹೋಗುತ್ತಿವೆ. ಇದರಿಂದ ರೈತರು ಕಂಗಾಲಾಗಿದ್ದು, ಕೆರೆಗಳು ಭರ್ತಿಯಾಗಿ ಹೆಚ್ಚುವರಿ ನೀರು ಹೊಲಗದ್ದೆಗಳಿಗೆ ನುಗ್ಗುತ್ತಿವೆ. ಸದ್ಯ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ. ಮತ್ತೆ ಮಳೆ ಸುರಿಯುವ ಸಾಧ್ಯತೆಯಿದೆ.