ಶಿವಮೊಗ್ಗದಲ್ಲಿ ಭಾರೀ ಮಳೆ: ತುಂಗಾ ಜಲಾಶಯದಿಂದ 60 ಸಾವಿರ ಕ್ಯೂಸೆಕ್ ನೀರು ಬಿಡುಗಡೆ - ಉಕ್ಕಿ ಹರಿಯುತ್ತಿರುವ ತುಂಗಾ ನದಿ
🎬 Watch Now: Feature Video
ಶಿವಮೊಗ್ಗ: ಕಳೆದೆರಡು ದಿನಗಳಿಂದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತುಂಗಾ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ 60 ಸಾವಿರ ಕ್ಯೂಸೆಕ್ ನೀರನ್ನು ತುಂಗಾ ನದಿಗೆ ಬಿಡಲಾಗುತ್ತಿದೆ. ಇದರ ಪರಿಣಾಮವಾಗಿ ತುಂಗಾ ನದಿ ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಉಂಟಾಗಿದೆ. ಇತಿಹಾಸ ಪ್ರಸಿದ್ಧ ಕೊರ್ಪಲಯ್ಯನ ಛತ್ರ ಮುಳುಗಡೆಯಾಗಿದೆ.