ಮಲೆನಾಡಿನಲ್ಲಿ ಭಾರಿ ಮಳೆ... ಮೈದುಂಬಿದ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರ ದಂಡು - Linganamakki Dam
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4348032-thumbnail-3x2-sow.jpg)
ಶಿವಮೊಗ್ಗ: ಮಲೆನಾಡಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವಿಶ್ವ ವಿಖ್ಯಾತ ಜೋಗ ಜಲಾಪಾತ ಮೈದುಂಬಿ ಹರಿಯುತ್ತಿದೆ. ಲಿಂಗನಮಕ್ಕಿ ಅಣೆಕಟ್ಟೆಯಿಂದ 11 ಕ್ರಸ್ಟ್ ಗೇಟ್ಗಳ ಮೂಲಕ ಶರಾವತಿ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ರಾಜ, ರಾಣಿ, ರೋರರ್, ರಾಕೆಟ್ ಜಲಧಾರೆಗಳು ಧುಮ್ಮಿಕ್ಕುತ್ತಿವೆ. ಈ ಮನಮೋಹಕ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಈ ಬಗ್ಗೆ ಈಟಿವಿ ಭಾರತ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ...