ತುಮಕೂರಿನಲ್ಲಿ ಭಾರಿ ಮಳೆ: ಗರಿಗೆದರಿದ ಕೃಷಿ ಚಟುವಟಿಕೆ ....
🎬 Watch Now: Feature Video
ಶಾಶ್ವತ ಬರಪೀಡಿತ ಪ್ರದೇಶ ಎಂದು ಹಣೆಪಟ್ಟಿ ಕಟ್ಟಿಕೊಂಡಿದ್ದ ಪಾವಗಡ ತಾಲೂಕಿನಲ್ಲಿ ಕಳೆದ 15 ದಿನಗಳಿಂದ ಧಾರಕಾರ ಮಳೆಯಾಗಿ ರೈತರಲ್ಲಿ ಹೊಸ ಭರವಸೆ ಮೂಡಿಸಿದಂತಾಗಿದೆ. ತಾಲೂಕಿನಲ್ಲಿ ಅಂತರ್ಜಲ ಮಟ್ಟ ಕುಸಿತದಿಂದ ಮಾಡಿದ ಸಾಲ ತೀರಿಸಲಾಗದೇ ಕೃಷಿ ಭೂಮಿ ಮಾರಾಟ ಮಾಡಿ ಜೀವನೋಪಾಯಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗಿದ್ದ ಜನಸಾಮಾನ್ಯರಲ್ಲಿ ಹಾಗೂ ರೈತರಲ್ಲಿ ಸಂತಸ ಮನೆ ಮಾಡಿದೆ. ಮಳೆಯ ಆರ್ಭಟದಿಂದ ಅಂತರ್ಜಲ ಮಟ್ಟ ಹೆಚ್ಚಿ, ಕೆರೆ ಕಟ್ಟೆಗಳು ತುಂಬಿದ್ದು, ಬತ್ತಿಹೋದ ಬಾವಿಗಳಲ್ಲಿ, ಕೊಳವೆ ಬಾವಿಗಳಲ್ಲಿ ಅಂತರ್ಜಲ ಮತ್ತೆ ಹೆಚ್ಚಾಗಿರುವ ಕಾರಣ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ.
Last Updated : Oct 7, 2019, 6:07 PM IST