ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ: ಗರಿಗೆದರಿದ ಕೃಷಿ ಚಟುವಟಿಕೆಗಳು - ಉತ್ತರ ಕನ್ನಡ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7859260-976-7859260-1593676431842.jpg)
ಕಳೆದ ಕೆಲ ದಿನಗಳಿಂದ ಬಿಸಿಲ ಅಬ್ಬರವೇ ಜೋರಾಗಿದ್ದ ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಉತ್ತಮ ಮಳೆ ಸುರಿಯಲಾರಂಭಿಸಿದೆ. ಜಿಲ್ಲೆಯ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದು ಮಧ್ಯಾಹ್ನದ ಹೊತ್ತಿಗೆ ಭರ್ಜರಿ ಮಳೆಯಾಗುತ್ತಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿತ್ತು. ಆದರೆ, ಇಂದು ಕಾರವಾರ ಸೇರಿದಂತೆ, ಕರಾವಳಿ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಬಿರುಸಿನಿಂದ ಸಾಗಿವೆ.