ಉತ್ತರ ಕನ್ನಡದಲ್ಲಿ ಮುಂದುವರೆದ ಮಳೆಯ ಅಬ್ಬರ - heavy rain news
🎬 Watch Now: Feature Video
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಜೋರಾಗಿದ್ದು, ಸತತ ಎರಡನೇ ದಿನವೂ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಮಲೆನಾಡಿನ ಶಿರಸಿ, ಸಿದ್ದಾಪುರ ಹಾಗೂ ಯಲ್ಲಾಪುರ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಹವಮಾನ ಇಲಾಖೆ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಬಗ್ಗೆ ಮುನ್ಸೂಚನೆ ನೀಡಿದ್ದು, ಕರಾವಳಿ ಭಾಗಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಡಲಿನಲ್ಲಿಯೂ ಅಲೆಗಳ ಅಬ್ಬರ ಜೋರಾಗಿದ್ದು, ಮೀನುಗಾರಿಕೆಗೆ ತೆರಳಿದ ಬೋಟ್ಗಳು ವಾಪಸ್ ಆಗಿವೆ.