ಮಲೆನಾಡಿನಲ್ಲಿ ಮತ್ತೆ ಮಳೆ: ಜನಜೀವನ ಅಸ್ತವ್ಯಸ್ತ - ಮಲೆನಾಡಿನಲ್ಲಿ ಮತ್ತೆ ಮಳೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4985144-thumbnail-3x2-ckm.jpg)
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮತ್ತೆ ಧಾರಾಕಾರ ಮಳೆಯಾಗುತ್ತಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಲೆನಾಡಿನ ಜನರು ಹೈರಾಣಾಗಿ ಹೋಗಿದ್ದಾರೆ. ಐದು ದಿನಗಳ ಕಾಲ ಬಿಡುವು ನೀಡಿದ್ದ ಮಳೆ ಈಗ ಮತ್ತೆ ಪ್ರಾರಂಭವಾಗಿದೆ. ರಾರಾಕಾರ ಮಳೆ ಸುರಿಯುತ್ತಿದ್ದು, ನಿರಂತರ ಸುರಿಯುತ್ತಿರುವ ಮಳೆಯಿಂದ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಪ್ರಮುಖವಾಗಿ ಬಾಳೆಹೊನ್ನೂರು, ಮಾಗುಂಡಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮುತ್ತಮುತ್ತಲ ಹಳ್ಳಿಗಳಲ್ಲಿಯೂ ಮಳೆಯಾಗುತ್ತಿದೆ. ಕಾಫಿ ಹಾಗೂ ಅಡಿಕೆ ತೋಟದಲ್ಲಿಯೂ ನೀರು ನಿಲ್ಲಲು ಪ್ರಾರಂಭವಾಗಿದ್ದು,
ನಿನ್ನೆ ಸಂಜೆಯಿಂದ ಸುರಿಯುತ್ತಿರುವ ಮಳೆಯಿಂದ ಹತ್ತಾರೂ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿಯೂ ವ್ಯತ್ಯಯ ಉಂಟಾಗಿದೆ.