ಮೈಸೂರಿನಲ್ಲಿ ಜಿಟಿಜಿಟಿ ಮಳೆ: ವಾಹನ ಸವಾರರ ಪರದಾಟ - mysrainnews
🎬 Watch Now: Feature Video
ಮೈಸೂರು: ಕಳೆದ ಒಂದು ವಾರದಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇಂದು ಕೂಡ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಗೆ ವಾಹನ ಸವಾರರು ಪರದಾಡಿದರು. ಮಡಿಕೇರಿಯಲ್ಲಿ ಬೀಳುತ್ತಿರುವ ಭಾರೀ ಮಳೆ ಹಾಗೂ ಕೇರಳ ವಯನಾಡು ಪ್ರದೇಶದಲ್ಲಿ ಬೀಳುತ್ತಿರುವ ಭಾರಿ ಮಳೆಯಿಂದಾಗಿ ಮೈಸೂರಿನಲ್ಲೂ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನೆರಡು ದಿನ ಇದೇ ರೀತಿ ಜಡಿ ಮಳೆ ಮುಂದುವರಿಯಲಿದೆ.