ಕಲ್ಪತರು ನಾಡಿನಲ್ಲಿ ಭಾರೀ ಮಳೆ... ತುಂಬಿ ಹರಿದ ಹಳ್ಳ-ಕೊಳ್ಳಗಳು - ತುಮಕೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ
🎬 Watch Now: Feature Video
ತುಮಕೂರು: ಜಿಲ್ಲೆಯ ಪಾವಗಡ, ಕೊರಟಗೆರೆ, ಮಧುಗಿರಿ ತಾಲೂಕಿನಲ್ಲಿ ಭಾರೀ ಮಳೆಯಾಗಿದೆ. ಹೀಗಾಗಿ ಬಹುತೇಕ ಎಲ್ಲಾ ಹಳ್ಳ-ಕೊಳ್ಳಗಳಲ್ಲಿ ನೀರು ಹರಿಯುತ್ತಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಪಾವಗಡ ತಾಲೂಕಿನಲ್ಲಿ ಹರಿಯುವ ಉತ್ತರ ಪಿನಾಕಿನಿಯ ನದಿಯಲ್ಲಿ ನೀರು ಧುಮ್ಮಿಕ್ಕಿ ಹರಿಯುತ್ತಿದೆ. ಹಲವು ವರ್ಷಗಳ ನಂತರ ಉತ್ತರ ಪಿನಾಕಿನಿ ನದಿಯಲ್ಲಿ ಹರಿಯುತ್ತಿರುವ ಜಲಧಾರೆಯನ್ನು ನೋಡಲು ಜನರು ಮುಗಿಬೀಳುತ್ತಿದ್ದಾರೆ.