ಮಂಡ್ಯ ಜಿಲ್ಲೆಯ ವಿವಿಧೆಡೆ ಆಲಿಕಲ್ಲು ಸಹಿತ ಭಾರೀ ಮಳೆ - Heavy rains accompanied by hail
🎬 Watch Now: Feature Video
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಬೇವಿನಕುಪ್ಪೆ ಗ್ರಾಮದ ಸುತ್ತಮುತ್ತ ಆಲಿಕಲ್ಲು ಮಳೆಯಾಗಿದ್ದು, ಜಿಲ್ಲಾದ್ಯಂತ ಭಾರೀ ಬಿರುಗಾಳಿ ಸಹಿತ ಮಳೆಯಾಗಿ ಅವಾಂತರ ಸೃಷ್ಟಿಸಿದೆ. ನಿನ್ನೆಯಷ್ಟೇ ಸಿಡಿಲು ಸಹಿತ ಭಾರೀ ಮಳೆಯಾಗಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದಲ್ಲಿ ಬೆಳೆಗಳು ನಾಶವಾಗಿದ್ದವು. ಇಂದು ಕೂಡ ಆಲಿಕಲ್ಲು ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ವರುಣನ ಆರ್ಭಟದಿಂದ ನಗರದ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ.