ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರ: ಮನೆ ಮೇಲೆ ಬಿದ್ದ ಮರ - Chikmagalur Heavy rains experienced throughout News
🎬 Watch Now: Feature Video
ಚಿಕ್ಕಮಗಳೂರು ನಗರ ಸೇರಿದಂತೆ, ಮಲೆನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೇ ಧಾರಾಕಾರ ಮಳೆ ಸುರಿಯುತ್ತಿದ್ದು, ಈ ಮಳೆ ನಾನಾ ಅವಾಂತರಗಳನ್ನು ಸೃಷ್ಟಿ ಮಾಡುತ್ತಿದೆ. ನಿರಂತರ ಮಳೆ ಹಾಗೂ ಗಾಳಿ ಬೀಸುತ್ತಿರುವ ಹಿನ್ನೆಲೆ, ಬೃಹತ್ ಗಾತ್ರದ ಮರ ಮನೆಯ ಮೇಲೆ ಬಿದ್ದು, ಮನೆ ಸಂಪೂರ್ಣ ಜಖಂ ಆಗಿದೆ. ಜಿಲ್ಲೆಯ ಶೃಂಗೇರಿ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ ಬೃಹತ್ ಗಾತ್ರದ ಮರ ಮನೆ ಮೇಲೆ ಬಿದ್ದು, ಮನೆ ಸಂಪೂರ್ಣ ಧ್ವಂಸವಾಗಿದೆ. ಶೃಂಗೇರಿ, ಕೆರೆಕಟ್ಟೆ, ಕಿಗ್ಗಾ, ಭಾಗದಲ್ಲಿಯೂ ನಿರಂತರ ಮಳೆಯಾಗುತ್ತಿದ್ದು, ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಪ್ರವಾಸಿಗರ ವಾಹನಗಳನ್ನು ನಿಲುಗಡೆ ಮಾಡುತ್ತಿದ್ದ, ಶೃಂಗೇರಿಯ ಗಾಂಧಿ ಮೈದಾನವು ಮಳೆ ನೀರಿನಿಂದ ಜಲಾ ವೃತವಾಗಿದ್ದು, ಈ ಭಾಗದಲ್ಲಿ ಮಳೆಯ ನೀರು ರಸ್ತೆ ಮೇಲೆ ಹರಿಯುತ್ತಿದೆ. ನಿರಂತರ ಮಳೆ ಸುರಿಯುತ್ತಿರುವ ಕಾರಣ ಮಲೆನಾಡಿನ ಭಾಗದ ಜನರು ಆತಂಕದಲ್ಲಿದ್ದಾರೆ.