ದಾವಣಗೆರೆ ಜಿಲ್ಲಾದ್ಯಂತ ಭಾರಿ ಮಳೆ : ಹಲವು ಮನೆಗಳು ಜಲಾವೃತ - ಭಾರಿ ಮಳೆಗೆ ಹಲವು ಮನೆಗಳು ಜಲಾವೃತ
🎬 Watch Now: Feature Video
ಜಿಲ್ಲಾದ್ಯಂತ ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಇದರಿಂದಾಗಿ ಬಹುತೇಕ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಜನ ಜೀವನ ಅಸ್ತವ್ಯಸ್ತವಾಗಿದೆ. ಚನ್ನಗಿರಿ ತಾಲೂಕಿನ ನಲ್ಲೂರ ಗ್ರಾಮಕ್ಕೆ ಹಳ್ಳದ ನೀರು ನುಗ್ಗಿದ್ದು, ಹತ್ತಾರು ಮನೆಗಳು ಜಲಾವೃತವಾಗಿವೆ. ಅಲ್ಲದೆ ನಲ್ಲೂರು ಗ್ರಾಮದಿಂದ ಶಿವಮೊಗ್ಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ನೀರು ಹರಿಯುತ್ತಿದೆ. ವಾಹನ ಸವಾರರು ಹರಸಾಹಸ ಪಡುತ್ತಿದ್ದಾರೆ. ಸೇತುವೆ ಮೇಲೆ ನೀರು ಹರಿಯುತ್ತಿದ್ದರೂ ಇದನ್ನು ಲೆಕ್ಕಿಸದೇ ವಾಹನ ಸವಾರರು ಸಂಚರಿಸುತ್ತಿದ್ದಾರೆ. ಇಲ್ಲಿನ ಗ್ರಾಮಸ್ಥರು ಹಲವು ವರ್ಷಗಳಿಂದ ಇದೇ ಸಮಸ್ಯೆ ಅನುಭವಿಸುತ್ತಿದ್ದಾರೆ. ಹಲವು ಬಾರಿ ಅಧಿಕಾರಿಗಳು ಹಾಗೂ ಜನಪ್ರನಿಧಿಗಳ ಗಮನಕ್ಕೂ ತಂದರು ಶಾಶ್ವತ ಪರಿಹಾರ ಸಿಕ್ಕಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.