ಉತ್ತರಾಖಂಡದಲ್ಲಿ ಭಾರಿ ಹಿಮಪಾತ: ಗುಡ್ಡಗಾಡು ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಣೆ - ಉತ್ತರಖಂಡದಲ್ಲಿ ಹಿಮಪಾತ ಸಂಭವ
🎬 Watch Now: Feature Video
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರಿ ಹಿಮಪಾತವಾಗುತ್ತಿದ್ದು ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ಎರಡು ದಿನಗಳ ಕಾಲ ರೆಡ್ ಅಲರ್ಟ್
ಘೋಷಿಸಿದೆ. ಅಷ್ಟೇ ಅಲ್ಲ ಮುನ್ನಚ್ಚರಿಕೆ ಕ್ರಮವಾಗಿ ಮಸ್ಸೂರಿಯಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದೆ. ಮಂಗಳವಾರ ಮತ್ತು ಬುಧವಾರ ಉತ್ತರಾಖಂಡದ ಪರ್ವತ ಪ್ರದೇಶಗಳಲ್ಲಿ ಭಾರಿ ಹಿಮಪಾತವಾಗುವ ಸಾಧ್ಯತೆ ಇದೆ ಎಂದು ಹವಾಮಾನ ನಿರ್ದೇಶಕ ವಿಕ್ರಮ್ ಸಿಂಗ್ ಹೇಳಿದ್ದಾರೆ. ಈ ನಡುವೆ ಪ್ರವಾಸಿಗರು ಮತ್ತು ಸ್ಥಳೀಯರು ಹಿಮಪಾತವನ್ನು ಆಸ್ವಾದಿಸಿ ಎಂಜಾಯ್ ಮಾಡುತ್ತಿದ್ದಾರೆ.
Last Updated : Jan 7, 2020, 3:16 PM IST