ಚಿಕ್ಕಮಗಳೂರು: ಧಾರಾಕಾರ ಮಳೆಯಿಂದ ಹೆಬ್ಬಾಳ ಸೇತುವೆ ಮುಳುಗಡೆ
🎬 Watch Now: Feature Video
ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ನದಿಗಳ ಹರಿವಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ತುಂಗ, ಭದ್ರಾ, ಹೇಮಾವತಿ ನದಿಗಳ ಹರಿವಿನ ಮಟ್ಟದಲ್ಲಿ ಏರಿಕೆ ಉಂಟಾಗಿದ್ದು ಎಲ್ಲ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಸತತ ಮಳೆಯಿಂದ ಕಳಸ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳ ಸೇತುವೆ ಮುಳುಗಡೆಯಾಗಿದೆ. ಈ ಸೇತುವೆ ಮೇಲಿಂದ ನೀರು ಹರಿಯಲು ಪ್ರಾರಂಭಿಸಿದೆ. ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.