ಹೇಮಾವತಿ ಜಲಾಶಯ ಭರ್ತಿ: ನದಿಗೆ ನೀರು ಬಿಡುಗಡೆ - hassan latest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8334991-986-8334991-1596811230921.jpg)
ಹಾಸನದ ಹೇಮಾವತಿ ಜಲಾಶಯ ಬಹುತೇಕ ಭರ್ತಿಯಾದ ಹಿನ್ನೆಲೆಯಲ್ಲಿ ಜಲಾಶಯದಿಂದ ನದಿಗೆ ನೀರು ಬಿಡಲಾಗಿದೆ. ಇಂದು ಬೆಳಗ್ಗೆ ಹೇಮಾವತಿ ಜಲಾಶಯದಿಂದ ನೀರು ಹೊರಬಿಡಲು ಉಸ್ತುವಾರಿ ಸಚಿವ ಗೋಪಾಲಯ್ಯ ಸೂಚಿಸಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಹೇಮಾವತಿ ಜಲಾಶಯದ 6 ಕ್ರಸ್ಟ್ ಗೇಟ್ ಮೂಲಕ ಸುಮಾರು 20 ಸಾವಿರ ಕ್ಯೂಸೆಕ್ ನೀಡು ಬಿಡುಗಡೆ ಮಾಡಿದ್ದಾರೆ. ನಾಲೆಗಳಿಗೂ ನೀರು ಬಿಡಗಡೆ ಮಾಡಲಾಗಿದೆ. ಸಕಲೇಶಪುರ ಹಾಗೂ ಮೂಡಿಗೆರೆ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ಹೇಮಾವತಿ ಜಲಾಶಯ ಕೇವಲ ಮೂರು ದಿನಗಳ ಅಂತರದಲ್ಲಿ ಭರ್ತಿ ಹಂತ ತಲುಪಿದೆ. ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಿದ್ದಾರೆ.