ಕುಣಿಗಲ್ಗೆ ಹೇಮಾವತಿ ನೀರು ಹರಿಸುವಲ್ಲಿ ತಾರತಮ್ಯ: ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ - Kunigal
🎬 Watch Now: Feature Video

ಗೊರೂರಿನ ಹೇಮಾವತಿ ಜಲಾಶಯದಿಂದ ಹರಿಸಲಾಗುತ್ತಿರುವ ನೀರಿನಲ್ಲಿ ಕುಣಿಗಲ್ ತಾಲೂಕಿಗೆ ತಾರತಮ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಶಾಸಕ ರಂಗನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕುಣಿಗಲ್ ಬಳಿಯ ಕುರುಡಿಹಳ್ಳಿ ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟಿಸಿ, ತುಮಕೂರು ಜಿಲ್ಲಾಧಿಕಾರಿ, ಸಚಿವ ಮಾಧುಸ್ವಾಮಿ, ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು.