ಪ್ರವಾಸೋದ್ಯಮ ದಿನದ ಅಂಗವಾಗಿ ಧಾರವಾಡದಲ್ಲಿ ಪಾರಂಪರಿಕ ನಡಿಗೆ ಕಾರ್ಯಕ್ರಮ - Heritage Walk in Dharwad as part of Tourism Day
🎬 Watch Now: Feature Video
ಧಾರವಾಡ: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಗುರುವಾರ ಪ್ರವಾಸೋದ್ಯಮ ಇಲಾಖೆಯು ನಗರದಲ್ಲಿ ಏರ್ಪಡಿಸಿದ್ದ ಪಾರಂಪರಿಕ ನಡಿಗೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್ ಚಾಲನೆ ನೀಡಿದರು. ದುರ್ಗಾದೇವಿ ದೇವಸ್ಥಾನದಿಂದ ಪ್ರಾರಂಭವಾದ ಪಾರಂಪರಿಕ ನಡಿಗೆ ಲಿಂಗಾಯತ ಪುರಭವನ, ಅಂಜುಮನ್ ಕಾಲೇಜು, ಸುಭಾಸ್ ರಸ್ತೆ, ಕರ್ನಾಟಕ ವಿದ್ಯಾವರ್ಧಕ ಸಂಘ, ಶಿಕ್ಷಕಿಯರ ತರಬೇತಿ ಸಂಸ್ಥೆ ಮೂಲಕ ಡಾ. ಮಲ್ಲಿಕಾರ್ಜುನ ಮನಸೂರ ಕಲಾಭವನ ಆವರಣ ತಲುಪಿ ಕೊನೆಗೊಂಡಿತು.