ವಾಣಿಜ್ಯನಗರಿಗೂ ಕರಿ ನೆರಳು.. ಭದ್ರತೆ ಹೆಚ್ಚಿಸಿದ ಪೊಲೀಸ್ ಇಲಾಖೆ - Police Department surveillance in sensitive areas
🎬 Watch Now: Feature Video
ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ನಗರದ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳ ಮೇಲೆ ಹೆಚ್ಚಿನ ಕಣ್ಗಾವಲಿರಿಸಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಸ್ತುಗಳ ಮೇಲೆ ಕಣ್ಣಿಡಲಾಗಿದೆ. ಕಳೆದ ಒಂದು ವಾರದಿಂದಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಇಂದು ಭದ್ರತೆ ಮತ್ತಷ್ಟು ಹೆಚ್ಚಿಸಲಾಗಿದೆ. ನಗರದ ಸೂಕ್ಷ್ಮ ಪ್ರದೇಶಗಳ ಮೇಲೂ ಪೊಲೀಸ್ ಇಲಾಖೆ ಕಣ್ಗಾವಲಿಟ್ಟಿದೆ.