ಹುಣಸೂರು ಉಪ ಕಣ: ಎರಡನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿಗೆ ಮುನ್ನಡೆ - ಹುಣಸೂರು ಉಪ ಚುನಾವಣಾ ಮತ ಎಣಿಕೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5313316-thumbnail-3x2-kokak.jpg)
ಮೈಸೂರು: ಇಂದು ಉಪ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಮೊದಲ ಸುತ್ತು ಮುಕ್ತಾಯವಾಗಿದ್ದು, ಮೊದಲ ಸುತ್ತಿನಲ್ಲಿ ಮನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಎರಡನೇ ಸುತ್ತಿನಲ್ಲೂ ಮುನ್ನಡೆ ಉಳಿಸಿಕೊಂಡು ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಮುನ್ನಡೆಯಲ್ಲಿದ್ದಾರೆ. ಇನ್ನು ಮತ ಎಣಿಕೆಗೂ ಮುನ್ನಾ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಸಾಯಿಬಾಬಾ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸಿ ಸಾಯಿಬಾಬಾನಿಗೆ ಹೊಸ ಬೆಳ್ಳಿ ಪಾದುಕೆ ಸಮರ್ಪಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಮತ ಎಣಿಕೆ ಆರಂಭವಾದ ಕೆಲವೇ ಹೊತ್ತಿನಲ್ಲೇ ಹೊರಟು ಹೋಗಿದ್ದಾರೆ. ಇನ್ನು ಈ ಕುರಿತ ಹೆಚ್ಚಿನ ಮಾಹಿತಿಯನ್ನು ನಮ್ಮ ಪ್ರತಿನಿಧಿ ನೀಡಿದ್ದಾರೆ.
TAGGED:
ಹುಣಸೂರು ಉಪ ಚುನಾವಣಾ ಮತ ಎಣಿಕೆ