ಮೂಡಿಗೆರೆ ತಾಲೂಕಿನಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಒಂಟಿ ಸಲಗ.. ವಿಡಿಯೋ - ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ
🎬 Watch Now: Feature Video
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರಮುಖ ರಸ್ತೆಯಲ್ಲಿ ಬೃಹತ್ ಗಾತ್ರದ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದೆ. ಸ್ಥಳೀಯರಾದ ಮೂಡಿಗೆರೆ ಪ್ರಮೋದ್ ಎಂಬುವರು ತಮ್ಮ ಸ್ನೇಹಿತರ ಜೊತೆ ದೇವರ ಮನೆಗೆ ಕಾರಿನಲ್ಲಿ ಹೋಗುವ ಸಂದರ್ಭದಲ್ಲಿ ಏಕಾಏಕೀ ಒಂಟಿ ಸಲಗ ರಸ್ತೆಗೆ ಎಂಟ್ರಿಕೊಟ್ಟಿತ್ತು. ಈ ಬೃಹತ್ ಗಾತ್ರದ ಆನೆಯ ದೃಶ್ಯ ಸೆರೆ ಹಿಡಿದಿದ್ದಾರೆ. ಈ ಪ್ರದೇಶದಲ್ಲಿ ಹಲವಾರು ಬಾರಿ ಒಂಟಿ ಸಲಗ ಕಾಣಿಸಿಕೊಂಡಿದೆ. ಸ್ಥಳೀಯರು ಅರಣ್ಯ ಇಲಾಖೆಗೆ ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಈ ಒಂಟಿ ಸಲಗದ ದೃಶ್ಯ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ.