ಹುಳಿಮಾವು ಅಚ್ಚುಕಟ್ಟುಪ್ರದೇಶದಲ್ಲಿ ಕಾರ್ಯಾಚರಣೆ: ಅಗ್ನಿಶಾಮಕ ಸಿಬ್ಬಂದಿ ಕಾರ್ಯಕ್ಕೆ ಜನ ಮೆಚ್ಚುಗೆ - bangalore Hulimavu Lake breakdown news
🎬 Watch Now: Feature Video
ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿರುವ ಹುಳಿಮಾವು ಕೆರೆಯ ಕಟ್ಟೆ ಒಡೆದು ಭಾರಿ ಅವಾಂತರ ಸೃಷ್ಟಿಯಾಗಿದೆ. ಪ್ರಮುಖವಾಗಿ ನ್ಯಾನೋ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್ನ ತುರ್ತು ಚಿಕಿತ್ಸಾ ಘಟಕ ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ಮೌಲ್ಯದ ಯಂತ್ರಗಳು ಸೇರಿ ಭಾರಿ ಪ್ರಮಾಣದಲ್ಲಿ ಹಾನಿ ಉಂಟಾಗಿದೆ ಹಾಗೂ ಕೆರೆ ಬಳಿಯ ಮನೆಗಳು ಜಲಾವೃತವಾಗಿದೆ. ಅಗ್ನಿಶಾಮಕದಳ ಸಿಬ್ಬಂದಿ ತಡರಾತ್ರಿಯವರೆಗೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಸ್ಥಳೀಯರು ಅಗ್ನಿಶಾಮಕದಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.