ನನಗೆ ಪೊಲೀಸ್ ಭದ್ರತೆ ಬೇಡ, ಕಾರ್ಯಕರ್ತರೆ ಶ್ರೀರಕ್ಷೆ.. ಸಂಸದೆ ಶೋಭಾ ಕರಂದ್ಲಾಜೆ
🎬 Watch Now: Feature Video
ನನಗೆ ಪೊಲೀಸ್ ಭದ್ರತೆ ಬೇಡ, ಕಾರ್ಯಕರ್ತರೆ ನನಗೆ ಶ್ರೀರಕ್ಷೆ ಎಂದು ವಿದೇಶದಿಂದ ಬೆದರಿಕೆ ಕರೆ ಬೆನ್ನಲ್ಲೇ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ. ವಿದೇಶಿ ಕರೆಗಳ ಬಗ್ಗೆ ಕುಂದಾಪುರದಲ್ಲಿ ಮಾತನಾಡಿದ ಸಂಸದೆ, ನಿತ್ಯವೂ ಹಲವು ಬೆದರಿಕೆ ಕರೆ ಬರುತ್ತಿವೆ. ಈ ಬಗ್ಗೆ ತನಿಖೆಯಾಗಲಿ. ಬೆದರಿಕೆ ಕರೆ ಬಗ್ಗೆ ಡಿಜಿಐಜಿ ಪ್ರವೀಣ್ ಸೂದ್ ಬಳಿ ಮಾತನಾಡಿ, ವಿದೇಶದಿಂದ ಕರೆ ಬರುತ್ತಿರುವ ಸಂಖ್ಯೆಯನ್ನು ನೀಡಿದ್ದೇನೆ. ಪಿಎಫ್ಐ ಹಾಗೂ ಎಸ್‌ಡಿಪಿಐ ವಿರುದ್ಧ ಮಾತನಾಡಿದಾಗ ಇಂತಹ ಕರೆಗಳು ಬರುತ್ತಿವೆ ಎಂದು ಅವರು ತಿಳಿಸಿದ್ದಾರೆ.