ಕಿರಾಣಿ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ: ಪೊಲೀಸರಿಂದ ದಾಳಿ - 78 ಟೇಟ್ರಾ ಪ್ಯಾಕ್ ಅಕ್ರಮ ಮದ್ಯ
🎬 Watch Now: Feature Video
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕಿರಾಣಿ ಅಂಗಡಿ ಮೇಲೆ ದಾಳಿ ನಡೆಸಿದ ಪೊಲೀಸರು ಮದ್ಯ ಹಾಗೂ ಮಾರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ತಾಲೂಕಿನ ದೊಡ್ಡಬೆಲೆ ರೈಲ್ವೆ ನಿಲ್ದಾಣದಲ್ಲಿದ್ದ ಚಿಲ್ಲರೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ತ್ಯಾಮಗೊಂಡ್ಲು ಪೊಲೀಸ್ ಠಾಣೆ ಪಿಎಸ್ಐ ಕೃಷ್ಣಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಶಿವರಾಜು ಎಂಬುವರಿಗೆ ಸೇರಿದ ಅಂಗಡಿ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ 78 ಟೇಟ್ರಾ ಪ್ಯಾಕ್ ಅಕ್ರಮ ಮದ್ಯ ಸಿಕ್ಕಿದೆ.