ಚಿಕ್ಕಮಗಳೂರಲ್ಲಿ ಮೈದುಂಬಿ ಅಬ್ಬರಿಸುತ್ತಿರುವ ನದಿಗಳು... ಮಳೆ ಆರ್ಭಟಕ್ಕೆ ಶಾಲಾ-ಕಾಲೇಜಿಗೆ ರಜೆ - ಚಿಕ್ಕಮಗಳೂರಿನ ಅಪಾರ ಜಿಲ್ಲಾಧಿಕಾರಿ ಕುಮಾರ್
🎬 Watch Now: Feature Video
ಚಿಕ್ಕಮಗಳೂರು: ಮಳೆಯ ಅಬ್ಬರಕ್ಕೆ ಕಾಫಿನಾಡು ತತ್ತರಿಸುತ್ತಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಹೇಮಾವತಿ, ತುಂಗಾ, ಭದ್ರಾ ಹಾಗೂ ನೇತ್ರಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರಿನ ಐದು ತಾಲೂಕಿನ ಶಾಲಾ-ಕಾಲೇಜುಗಳಿಗೆ ಚಿಕ್ಕಮಗಳೂರಿನ ಅಪಾರ ಜಿಲ್ಲಾಧಿಕಾರಿ ಕುಮಾರ್ ರಜೆ ಘೋಷಣೆ ಮಾಡಿದ್ದಾರೆ.