ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ - ಕರಾವಳಿ ನಗರಿ
🎬 Watch Now: Feature Video

ಕರಾವಳಿ ನಗರಿ ಮಂಗಳೂರಿನಲ್ಲೂ ದಸರಾ ವೈಭವ ಕಳೆಗಟ್ಟಿದೆ. ನಾಡ ಹಬ್ಬ ದಸರೆಗಾಗಿ ನಗರದ ಪ್ರಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅದ್ಧೂರಿ ತಯಾರಿ ಶುರುವಾಗಿದೆ. ಇಂದು ನವದುರ್ಗೆಯರ ಸಹಿತ ಶಾರದಾ ಮಾತೆ, ಮಹಾಗಣಪತಿ ದೇವರ ವಿಗ್ರಹ ಪ್ರತಿಷ್ಠಾಪನೆ ನೆರವೇರಿತು. ಮುಂದಿನ 11 ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ದೇವಸ್ಥಾನವು ಹೊಂಬಣ್ಣದಿಂದ ಹೊಳೆಯುತ್ತಿದ್ದು, ವಿದ್ಯುದ್ದೀಪಗಳಿಂದ ಕಂಗೊಳಿಸುತ್ತಿದೆ. ಇಡೀ ನಗರವು ವಿದ್ಯುತ್ ದೀಪಗಳಿಂದ ಸಿಂಗಾರಗೊಂಡು ಮದುವಣಗಿತ್ತಿಯಂತೆ ಅಲಂಕಾರಗೊಂಡಿದೆ.