ಕೊರೊನಾ ಸೋಂಕು ನಿಯಂತ್ರಣಕ್ಕೆ ಸಹಕರಿಸಲು ಜನತೆಗೆ ಇಂಚಲ ಶ್ರೀಗಳ ಕರೆ - corona infection control
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6603625-thumbnail-3x2-blgv.jpg)
ಅಥಣಿ: ಮಹಾಮಾರಿ ಕೊರೊನಾ ವೈರಸ್ ಸೋಂಕು ಭಾರತಕ್ಕೆ ಅಂಟಿಕೊಂಡಿದ್ದು ವಿಷಾದಕರ ಸಂಗತಿ. ಇದು ಮಾರಣಾಂತಿಕ ವೈರಸಾಗಿದ್ದು, ಸೋಂಕು ಒಬ್ಬರಿಂದ ಇನ್ನೊಬ್ಬರಿಗೆ ತಗಲುವುದಕ್ಕಿಂತ ಮೊದಲೇ ಮುಂಜಾಗ್ರತಾ ಕ್ರಮ ವಹಿಸಬೇಕೆಂದು ಇಂಚಲದ ಶ್ರೀ ಶಿವಯೋಗೀಶ್ವರ ಸಾಧು ಸಂಸ್ಥಾನ ಮಠದ ಪೀಠಾಧಿಪತಿ ಡಾ.ಶಿವಾನಂದ ಭಾರತಿ ಸ್ವಾಮೀಜಿ ಸಲಹೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಹಾಕಿಕೊಟ್ಟ ಎಲ್ಲಾ ಸೂಚನೆಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಕೊರೊನಾ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು. ರೋಗದಿಂದ ನಮ್ಮನ್ನು ನಾವು ರಕ್ಷಿಸಿಕೊಂಡರೆ, ನಮ್ಮಿಂದ ಇತರರನ್ನು ರಕ್ಷಿಸಿದಂತಾಗುತ್ತದೆ. ಜನರು ಅನಾವಶ್ಯಕವಾಗಿ ಗುಂಪು-ಗುಂಪಾಗಿ ಸಂಚರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಅವರು ಕಿವಿಮಾತು ಹೇಳಿದ್ದಾರೆ.