ಚುಂಚನಗಿರಿ ಬೆಟ್ಟದಲ್ಲಿ ಕಾಣಿಸಿಕೊಂಡ ಚಿರತೆ: ಆತಂಕದಲ್ಲಿ ಸ್ಥಳೀಯರು - ಚುಂಚನಗಿರಿ ಬೆಟ್ಟದಲ್ಲಿ ಕಾಣಿಸಿಕೊಂಡ ಚಿರತೆ
🎬 Watch Now: Feature Video
ಮಂಡ್ಯ: ಇತ್ತೀಚೆಗೆ ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸುತ್ತಮುತ್ತಲ ರೈತರು ಗಾಬರಿಯಾಗಿದ್ದಾರೆ. ಬೆಟ್ಟದಲ್ಲಿರುವ ಚಿರತೆಯನ್ನು ಸ್ಥಳೀಯರು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ. ಈಗಾಗಲೇ ಸಾಕು ಪ್ರಾಣಿಗಳ ಮೇಲೆ ಅನೇಕ ಬಾರಿ ಚಿರತೆ ದಾಳಿ ನಡೆಸಿದೆ. ಹಾಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯುವಂತೆ ರೈತರು ಒತ್ತಾಯ ಮಾಡಿದ್ದಾರೆ.