ಬೆಲೆ ಏರಿಕೆ ಖಂಡಿಸಿ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಕಾಂಗ್ರೆಸ್‌ನಿಂದ ವಿನೂತನ ಪ್ರತಿಭಟನೆ - gadag protests by the Congress news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10734330-thumbnail-3x2-sin.jpg)
ಗದಗ : ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟಿಸಿದರು. ಜಾಲವಾಡಗಿ ಏತ ನೀರಾವರಿ ಕಾಮಗಾರಿ ಪ್ರಾರಂಭಿಸುವಂತೆ ಹಾಗೂ ರೈತ ವಿರೋಧಿ ಕೃಷಿ ಕಾನೂನು ಹಿಂಪಡೆಯುವಂತೆ ಆಗ್ರಹಿಸಿದರು. ಬ್ಲಾಕ್ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಯುವ ಮಹಿಳಾ ಕಾರ್ಯಕರ್ತರು ಸಹ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಮಹಿಳೆಯರಿಂದ ಟ್ರ್ಯಾಕ್ಟರ್ಗೆ ಹಗ್ಗ ಕಟ್ಟಿ ಎಳೆದು ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Last Updated : Feb 22, 2021, 10:56 PM IST