ಬಿಜೆಪಿ ಪ್ರತಿಪಕ್ಷಗಳನ್ನು ದಮನ ಮಾಡುತ್ತಿದೆ: ಈಶ್ವರ ಖಂಡ್ರೆ ಆರೋಪ - ಬಿಜೆಪಿ ವಿರುದ್ಧ ಈಶ್ವರ್ ಖಂಡ್ರೆ ಆಕ್ರೋಶ
🎬 Watch Now: Feature Video
ಬೆಂಗಳೂರು: ಪ್ರತಿಪಕ್ಷಗಳನ್ನು ದಮನ ಮಾಡುವ ಕೆಲಸ ಬಿಜೆಪಿಯಿಂದ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ದೂರಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರತಿಪಕ್ಷಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿದುಕೊಳ್ಳಲಾಗಿದೆ. ಪ್ರತಿಭಟನೆಯ ಹಕ್ಕನ್ನೇ ಕಿತ್ತುಕೊಳ್ಳುತ್ತಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ಸದನದಲ್ಲಿ ಧ್ವನಿ ಎತ್ತುತ್ತೇವೆ. ಸರ್ಕಾರ ಯಾವ ರೀತಿ ಉತ್ತರ ಕೊಡುತ್ತದೆ ಎಂಬುದನ್ನು ಕಾದು ನೋಡಬೇಕು ಎಂದರು.