ಜನಸೇವಕ ಕಾರ್ಯಕ್ರಮ: ಕಾಂಗ್ರೆಸ್, ಜೆಡಿಎಸ್ ವಿರುದ್ಧ ಬಿಜೆಪಿ ವಾಕ್ ಪ್ರಹಾರ - ಹಾಸನದಲ್ಲಿ ಜನಸೇವಕ ಕಾರ್ಯಕ್ರಮ
🎬 Watch Now: Feature Video
ಹಾಸನದಲ್ಲಿ ಜನಸೇವಕ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ಬಿಜೆಪಿ ನಾಯಕರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಹಾಗೂ ನಾಯಕರ ಮೇಲೆ ಮಾತಿನ ಪ್ರಹಾರ ನಡೆಸಿದರು. ದೇಶದಲ್ಲಿಯೇ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಂಡಿರುವಾಗ ಅದರ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ. ನಮ್ಮ ಜಿಲ್ಲೆಯಲ್ಲಿರುವುದು ಜೆಡಿಎಸ್ ಮತ್ತು ಬಿಜೆಪಿ ನಡುವೆ ಸಮರ. ಹಾಗಾಗಿ ಅಪ್ಪ - ಮಕ್ಕಳ ಪಕ್ಷವಾಗಿರುವ ಜೆಡಿಎಸ್ ಅನ್ನು ಮುಂದಿನ ದಿನಗಳಲ್ಲಿ ರಾಜ್ಯದಿಂದ ಕಿತ್ತೆಸೆಯಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ಶಾಸಕ ಪ್ರೀತಂ ಗೌಡ ಕರೆಕೊಟ್ಟರು. ಇನ್ನೂ ಸಂಸದ ಪ್ರತಾಪ್ ಸಿಂಹ ಕೂಡಾ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸಮಯದಲ್ಲಿ ಗ್ರಾಪಂ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಬಿಜೆಪಿ ಬೆಂಬಲಿತರನ್ನ ಸನ್ಮಾನಿಸಲಾಯಿತು.