ಜಾರಕಿಹೊಳಿ ಸಿಡಿ ಪ್ರಕರಣ ರೇಪ್ ಕೇಸ್ನಡಿ ದಾಖಲಾಗಬೇಕು : ಸದನದಲ್ಲಿ ಸಿಡಿದ ಸಿದ್ದರಾಮಯ್ಯ
🎬 Watch Now: Feature Video
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ತನಿಖೆ ಮಾಡುವಂತೆ ಪೊಲೀಸರಿಗೆ ತಿಳಿಸಲಾಗಿದೆ. ಈ ಕುರಿತು ಮಾಧ್ಯಮದ ಮುಂದೆ ಸ್ಪಷ್ಟಪಡಿಸಿದ್ದೇನೆ ಎಂದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವರದಿಗೆ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನೀವು ಪೊಲೀಸರಿಗೆ ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಆದೇಶಿಸಿಲ್ಲ ಎಂದರು. ಈ ವೇಳೆ ಪ್ರತಿಪಕ್ಷದ ನಾಯಕರು ಧಿಕ್ಕಾರ ಕೂಗುತ್ತಾ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿ ಬಾವಿಗಿಳಿದರು. ಕೊನೆಯಲ್ಲಿ ಮತ್ತೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಕೇಸ್ ಮುಚ್ಚಿ ಹಾಕುವ ಉದ್ದೇಶದಿಂದ ಎಸ್ಐಟಿ ರಚನೆ ಮಾಡಲಾಗಿದೆ ಎಂದು ಗುಡುಗಿದರು.