ಜೆಡಿಎಸ್ ಅಭ್ಯರ್ಥಿಯಾಗಿ ಹೆಸರು ಘೋಷಣೆಯಾದ ಬೆನ್ನಲ್ಲೆ ಅಮ್ಮಾಜಮ್ಮಗೆ ಕೊರೊನಾ ಸೋಂಕು ದೃಢ! - Ammajamma tests positive
🎬 Watch Now: Feature Video
ತುಮಕೂರು : ಶಿರಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ದಿ. ಶಾಸಕ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರ ಹೆಸರನ್ನ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಘೋಷಣೆ ಮಾಡಿದ್ದಾರೆ. ಈ ಮಧ್ಯೆ ಜೆಡಿಎಸ್ ಅಭ್ಯರ್ಥಿಯಾಗಿ ಹೆಸರು ಘೋಷಣೆಯಾದ ಬೆನ್ನಲ್ಲೆ ಅಮ್ಮಾಜಮ್ಮ ಅವರಿಗೆ ಕೊರೊನಾ ಸೋಂಕು ತಗುಲಿದ್ದು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರ ಮಗ ಸತ್ಯಪ್ರಕಾಶ್ ಈಟಿವಿ ಭಾರತಕ್ಕೆ ಸ್ಪಷ್ಟಪಡಿಸಿದ್ದಾರೆ. ಐದು ದಿನಗಳ ಕಾಲ ತಾಯಿಯವರ ಚಿಕಿತ್ಸೆ ಮುಂದುವರೆಯಲಿದೆ ಎಂದು ತಿಳಿಸಿರುವ ಸತ್ಯಪ್ರಕಾಶ್, ಚುನಾವಣಾ ಪ್ರಚಾರ ಕಾರ್ಯಕ್ಕೆ ಯಾವುದೇ ರೀತಿಯ ತೊಡಕು ಉಂಟಾಗುವುದಿಲ್ಲ ಎಂದು ಹೇಳಿದ್ದಾರೆ.