ವೈಯಕ್ತಿಕ ನಿಂದನೆ ಮಾಡುವುದರಲ್ಲೇ ಜನಪ್ರತಿನಿಧಿಗಳು ನಿರತರಾಗಿದ್ದಾರೆ: ಮನದಾಳ ಬಿಚ್ಚಿಟ್ಟ ಹೆಚ್. ವಿಶ್ವನಾಥ್ - etv bharat
🎬 Watch Now: Feature Video
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್, ಬಿಜೆಪಿಯವರು ಸುಳ್ಳಿನ ಸರಮಾಲೆಯಲ್ಲೇ ಗೆದ್ದಿದ್ದಾರೆ. ಆದರೆ, ಈ ಬಾರಿ ಹೀಗಾಗುವುದಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಈಟಿವಿ ಭಾರತ್ ಜೊತೆ ಮಾತನಾಡಿದ ಅವರು ವಿಧಾನಸಭೆ, ಲೋಕಸಭೆ ಸೇರಿದಂತೆ ಬಹಳಷ್ಟು ಚುನಾವಣೆಗಳನ್ನು ನೋಡಿದ್ದೇನೆ. ಆದರೆ, ಈ ಬಾರಿಯ ಸಾರ್ವತ್ರಿಕ ಚುನಾವಣೆ ವ್ಯಕ್ತಿಗತವಾಗಿದೆ. ಈ ದೇಶದ ಅಭಿವೃದ್ಧಿ ಮತ್ತು ಬೆಳವಣಿಗೆ ಕುರಿತು ಯಾರೂ ಚರ್ಚೆ ಮಾಡುತ್ತಿಲ್ಲ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಐದು ವರ್ಷಗಳಲ್ಲಿ ಏನು ಮಾಡಿದೆ ಎಂಬುದರ ಬಗ್ಗೆ ಚರ್ಚೆ ಮಾಡಿಲ್ಲ. ಅದರ ಬದಲು ವೈಯಕ್ತಿಕ ನಿಂದನೆ ಮಾಡುವುದರಲ್ಲೇ ಜನಪ್ರತಿನಿಧಿಗಳು ನಿರತರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.