ಮಾನ ಉಳಿಸಿಕೊಳ್ಳಲು ಬಿಜೆಪಿ ಸೇರಿದ್ದೇನೆ: ಅನರ್ಹ ಶಾಸಕ ಡಾ.ಸುಧಾಕರ್ ಹೇಳಿಕೆ
🎬 Watch Now: Feature Video
ಬೆಂಗಳೂರು: ಸಚಿವ ಸ್ಥಾನ ಸಿಗುತ್ತೆ ಎನ್ನುವ ಉದ್ದೇಶದಿಂದ ಬಿಜೆಪಿ ಸೇರಿಲ್ಲ, ಬದಲಾಗಿ ಕೇವಲ ಮಾನ ಉಳಿಸಿಕೊಳ್ಳಲು ಕಮಲ ಪಾಳಯದ ಜೊತೆ ಕೈ ಜೋಡಿಸಿದ್ದೇನೆ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಅನರ್ಹ ಶಾಸಕ ಡಾ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೋ, ಯಾವ ಜವಾಬ್ದಾರಿ ಕೊಡುತ್ತಾರೋ ಅದು ಅವರ ಪರಮಾಧಿಕಾರ. ನಾನಾಗಿಯೇ ಇಂಥ ಸಚಿವ ಸ್ಥಾನ ಕೊಡಿ ಎಂದು ಕೇಳುವುದಿಲ್ಲ ಎಂದು ಅವರು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.