ವಿಧಾನಸಭಾ ಕಲಾಪಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಿರ್ಧಾರಕ್ಕೆ ಪತ್ರಕರ್ತರ ಖಂಡನೆ - ಪತ್ರಕರ್ತರ ಖಂಡನೆ
🎬 Watch Now: Feature Video
ದಾವಣಗೆರೆ: ವಿಧಾನಸೌಧದ ಕಾರ್ಯಕಲಾಪ ವರದಿಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಸ್ಪೀಕರ್ ಹಾಗೂ ಸರ್ಕಾರದ ಕ್ರಮ ಖಂಡಿಸಿ ದಾವಣಗೆರೆಯಲ್ಲಿ ಜಿಲ್ಲಾ ವರದಿಗಾರರ ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ವರದಿಗಾರರ ಕೂಟದಿಂದ ಉಪವಿಭಾಗಧಿಕಾರಿ ಕಚೇರಿಗೆ ತೆರಳಿದ ಪತ್ರಕರ್ತರು, ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿ, ಈ ಕೂಡಲೇ ಈ ನಿರ್ಬಂಧ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಉಪ ವಿಭಾಗಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.