ಪ್ರಮಾಣವಚನ ಸ್ವೀಕಾರ ಮಾಡಲು ಆಹ್ವಾನ ಬಂದಿದೆ: ಶಾಸಕ ಕೆ.ಗೋಪಾಲಯ್ಯ - ಮಹಾಲಕ್ಷ್ಮಿ ಲೇಔಟ್ ಶಾಸಕ ಕೆ.ಗೋಪಾಲಯ್ಯ
🎬 Watch Now: Feature Video
ಬೆಂಗಳೂರು: ನಾಳೆ ಸಚಿವನಾಗಿ ಪ್ರಮಾಣವಚನ ಸ್ವೀಕಾರ ಮಾಡಲು ಆಹ್ವಾನ ಬಂದಿದೆ ಎಂದು ಮಹಾಲಕ್ಷ್ಮಿ ಲೇಔಟ್ ಶಾಸಕ ಕೆ.ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ ಪುತ್ರ ವಿಜಯೇಂದ್ರ ನಿವಾಸಕ್ಕೆ ಶಾಸಕ ಗೋಪಾಲಯ್ಯ ಭೇಟಿ ನೀಡಿ, ಕೆಲಕಾಲ ಮಾತುಕತೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೋಪಾಲಯ್ಯ, ಇದು ಮಾಮೂಲಿ ಭೇಟಿ, ವಾರದಲ್ಲಿ ಮೂರು ದಿನ ಇಲ್ಲಿಗೆ ಬಂದು ಹೋಗುತ್ತೇನೆ. ಅದರಂತೆ ಇವತ್ತು ಕೂಡ ಭೇಟಿ ಮಾಡಿದ್ದೇನೆ. ಇದರಲ್ಲಿ ವಿಶೇಷತೆ ಏನಿಲ್ಲ. ನಾಳೆ ಸಚಿವನಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದೇನೆ. ಹೀಗಾಗಿ ಕೃತಜ್ಞತೆ ಹೇಳಲು ಬಂದಿದ್ದೆ ಎಂದರು.