ಚಿಕ್ಕಮಗಳೂರಿನ ಶಾಲಾ ಆವರಣದಲ್ಲಿ ಸುಳಿದಾಡುತ್ತಿದ್ದ ಕಾಳಿಂಗ ಸೆರೆ
🎬 Watch Now: Feature Video
ಚಿಕ್ಕಮಗಳೂರು: ಕಳೆದ ಒಂದು ವಾರದಿಂದ ಶಾಲೆಯ ಆವರಣದಲ್ಲಿ ಸುಳಿದಾಡುತ್ತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಜಿಲ್ಲೆಯ ಕೊಪ್ಪ ತಾಲೂಕಿನ ಗುಣವಂತೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೆರೆ ಹಿಡಿಯಲಾಗಿದೆ. ಕಳೆದ ಒಂದು ವಾರದಿಂದ ಸುಮಾರು ಹತ್ತು ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಈ ಭಾಗದಲ್ಲಿ ಪ್ರತ್ಯಕ್ಷವಾಗಿತ್ತು.ಇದನ್ನು ಶಾಲಾ ಮಕ್ಕಳು ಹಾಗೂ ಶಿಕ್ಷಕರು ನೋಡಿ ಬೆಚ್ಚಿ ಬಿದ್ದಿದ್ದರು. ಕೂಡಲೇ ಶಾಲಾ ಶಿಕ್ಷಕರು, ಉರಗ ತಜ್ಞ ಕುದುರೆಗುಂಡಿಯ ಹರೀಂದ್ರ ಅವರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಹರೀಂದ್ರ ನಿರಂತರ ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಈ ಕಾಳಿಂಗ ಸರ್ಪವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸೆರೆ ಹಿಡಿಯುವ ವೇಳೆ ಕಾಳಿಂಗ ಸರ್ಪ ಹರೀಂದ್ರ ಮೇಲೆ ಎಂಟಕ್ಕೂ ಹೆಚ್ಚು ಬಾರಿ ದಾಳಿ ಮಾಡುವ ಪ್ರಯತ್ನ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಹರೀಂದ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೆರೆ ಹಿಡಿದ ಕಾಳಿಂಗ ಸರ್ಪವನ್ನು ಉರಗ ತಜ್ಞ ಹರಿಂದ್ರ ಸುರಕ್ಷಿತವಾಗಿ ಕೊಪ್ಪ ವಲಯದ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.