ಹಾವೇರಿ: ಕಾಗಿನೆಲೆಯಲ್ಲಿ ವಿಜೃಂಭಣೆಯಿಂದ ಜರುಗಿದ ಕನಕ ರಥೋತ್ಸವ - ಕನಕ ರಥೋತ್ಸವ ಲೇಟೆಸ್ಟ್ ನ್ಯೂಸ್
🎬 Watch Now: Feature Video
ಹಾವೇರಿ: ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ನಡೆದ ಕನಕ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಡೊಳ್ಳು ಬಾರಿಸುವ ಮೂಲಕ, ರಥೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು. ಕನಕದಾಸರ ಗದ್ದುಗೆಯಿಂದ ಆರಂಭವಾದ ರಥೋತ್ಸವ ಮೈಲಾರಲಿಂಗೇಶ್ವರ ದೇವಸ್ಥಾನದವರೆಗೆ ಸಾಗಿತು. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ರು.