ಕಲ್ಯಾಣ ಕರ್ನಾಟಕದಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ
🎬 Watch Now: Feature Video
ಕಲ್ಯಾಣ ಕರ್ನಾಟಕದಾದ್ಯಂತ ಕನ್ನಡದ ಹಬ್ಬ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರೇಶ್ವರ ಶಾಲೆಯಲ್ಲಿ ನಡೆದ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಅವರು ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಿದ್ದು, ಕೆಲವರು ಅಸಮಾಧಾನ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಪೊಲೀಸ್ ತಂಡ ಕನ್ನಡದಲ್ಲಿಯೇ ಗೌರವ ರಕ್ಷೆ ಸಲ್ಲಿಸಿದ್ದು ಈ ಬಾರಿಯ ವಿಶೇಷತೆಯಾಗಿತ್ತು. ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಪೊಲೀಸ್ ಕಮೀಷನರ್ ಎಂ.ಎನ್.ನಾಗರಾಜ್ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸುವರ್ಣ ಮಾಲಾಜಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.