ಕಾಫಿನಾಡಲ್ಲಿ ಕನ್ನಡ ರಾಜ್ಯೋತ್ಸವ: ಘಮಘಮಿಸಿದ ಕನ್ನಡ ಡಿಂಡಿಮ - kannada rajyotsava celebration in chikmagalore
🎬 Watch Now: Feature Video
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತ್ಯಂತ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯ್ತು. ನಗರದ ಸುಭಾಷ್ ಚಂದ್ರ ಬೋಸ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಗಿದ್ದು, ಸಚಿವ ಸಿ ಟಿ ರವಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಧ್ವಜಾರೋಹಣ ನೆರವೇರಿಸಿದರು. ನಂತರ ಸಚಿವ ಸಿ ಟಿ ರವಿ ಧ್ವಜವಂದನೆ ಸ್ವೀಕರಿಸಿದ್ರು. ಪೊಲೀಸ್, ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಹೋಂ ಗಾರ್ಡ್ ಪಥಸಂಚಲನ ನಡೆಸಿದರು. ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಸೇರಿ ಹಲವರು ಭಾಗಿಯಾಗಿದ್ದರು.