ಹದಗೆಟ್ಟ ರಸ್ತೆಗಳು: ಲೋಕೋಪಯೋಗಿ ಇಲಾಖೆಗೆ ಕರವೇ ಕಾರ್ಯಕರ್ತರ ಮುತ್ತಿಗೆ - Gadag Latest News
🎬 Watch Now: Feature Video
ಗದಗ: ಜಿಲ್ಲೆಯ ಲಕ್ಷ್ಮೇಶ್ವರ, ರೋಣ, ಗಜೇಂದ್ರಗಡ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ದೊಡ್ಡ-ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ದುರಸ್ತಿಪಡಿಸದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕೋಪಯೋಗಿ ಇಲಾಖೆಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು, ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹಾಗೂ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿದರು. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.