ಬಾಗಲಕೋಟೆ: ಪೆಟ್ರೋಲ್, ಡಿಸೇಲ್ ದರ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ - ಕರವೇ ಪ್ರತಿಭಟನೆ
🎬 Watch Now: Feature Video
ಬಾಗಲಕೋಟೆ: ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲ ದರ ಏರಿಕೆ ಖಂಡಿಸಿ ಬಸವೇಶ್ವರ ಸರ್ಕಲ್ನಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನೆ ನಡೆಸಲಾಯಿತು. ಕರವೇ ಮುಖಂಡ ರಮೇಶ ಬದ್ನೂರು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, 50ಕ್ಕೂ ಅಧಿಕ ಆಟೋ ಚಾಲಕರು ಭಾಗಿಯಾಗಿದ್ದರು. ಇದೇ ವೇಳೆ ತೈಲ ಬೆಲೆ ಏರಿಕೆ ಹಿಂಪಡೆಯುವಂತೆ ಅಪರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.