ಬೆಂಗಳೂರಿನಲ್ಲಿ ಕೊರೊನಾ ಲಸಿಕೆ ಪಡೆದ 97 ವರ್ಷದ ಹಿರಿಯ ಜೀವ... ಹೇಳಿದ್ದೇನು!? - ರಾಮಸ್ವಾಮಿ ಪಾರ್ಥಸಾರಥಿ
🎬 Watch Now: Feature Video
ಬೆಂಗಳೂರು: ಮೂರನೇ ಹಂತದ ಕೋವಿಡ್ ಲಸಿಕೆ ಅಭಿಯಾನ ಇಂದಿನಿಂದ ಆರಂಭಗೊಂಡಿದ್ದು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ವ್ಯಾಕ್ಸಿನ್ ನೀಡುವ ಕಾರ್ಯ ಶುರುವಾಗಿದೆ. ಬೆಂಗಳೂರಿನಲ್ಲೂ ಈ ಕೆಲಸ ಶುರುವಾಗಿದ್ದು, ಇಂದು 97 ವರ್ಷದ ರಾಮಸ್ವಾಮಿ ಪಾರ್ಥಸಾರಥಿ ಮಣಿಪಾಲ್ ಆಸ್ಪತ್ರೆಯಲ್ಲಿ ಲಸಿಕೆ ಪಡೆದಿದ್ದಾರೆ. ಮೊದಲೇ ರಿಜಿಸ್ಟರ್ ಮಾಡಿಕೊಂಡು ಹೋಗಿದ್ದ ರಾಮಸ್ವಾಮಿ, ಮಣಿಪಾಲ್ ಆಸ್ಪತ್ರೆಯಲ್ಲಿ ಲಸಿಕೆ ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ. ವ್ಯಾಕ್ಸಿನ್ ಬಳಿಕ ಅಭಿಪ್ರಾಯ ಹಂಚಿಕೊಂಡ ಅವರು, ಹರ್ಷ ವ್ಯಕ್ತಪಡಿಸಿದ್ದಾರೆ. ಜತೆಗೆ ಲಸಿಕೆ ನೀಡಿದ ಭಾಗದಲ್ಲಿ ಯಾವುದೇ ರೀತಿಯ ನೋವು ಕಾಣಿಸಿಕೊಂಡಿಲ್ಲ. ಲಸಿಕೆ ಪಡೆದುಕೊಳ್ಳುವುದರ ಬಗ್ಗೆ ಯಾವುದೇ ಹಿಂಜರಿಕೆ ಇಲ್ಲ ಎಂದಿದ್ದಾರೆ.