ಮುಟ್ಟದ ಬಂದ್ ಬಿಸಿ: ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ಸುಗಮ ಸಂಚಾರ - Karnataka band no effect,
🎬 Watch Now: Feature Video
ಕರ್ನಾಟಕ ಬಂದ್ ಬಿಸಿ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಗಳು ಸಂಚಾರದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ರೈಲ್ವೆ ಹಾಗೂ ಮೆಟ್ರೊ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಎಂದಿನಂತೆ ಸಂಚಾರ ಆರಂಭಗೊಂಡಿದ್ದು, ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಕೇಂಪೆಗೌಡ ಮೆಟ್ರೊ ಸ್ಟೇಷನ್ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಎಂದಿನಂತೆ ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಮೆಜೆಸ್ಟಿಕ್ನಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಈ ಸಂಬಂಧ ಸ್ಥಳದಿಂದಲೇ ನಮ್ಮ ಪ್ರತಿನಿಧಿಯಿಂದ ಪ್ರತ್ಯಕ್ಷ ವರದಿ ಇಲ್ಲಿದೆ.