'ಮರಾಠ ಅಭಿವೃದ್ಧಿ ಪ್ರಾಧಿಕಾರ ನಿರ್ಧಾರ ಹಿಂಪಡೆಯುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ'

🎬 Watch Now: Feature Video

thumbnail

By

Published : Dec 5, 2020, 12:32 PM IST

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಯೋಜಿಸಿರುವ ಕನ್ನಡ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡ ನೇತೃತ್ವದ ಪ್ರತಿಭಟನಾಕಾರರನ್ನು ಮೌರ್ಯ ಸರ್ಕಲ್ ಬಳಿಯೇ ಪೊಲೀಸರು ತಡೆಯುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಮಾತನಾಡಿದ ಟಿ.ಎ.ನಾರಾಯಣಗೌಡ, ಇಂದು ರಾಜ್ಯದ ಪ್ರತೀ ತಾಲೂಕು, ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ರಾಜ್ಯ ಸರ್ಕಾರ ಮರಾಠ ಪ್ರಾಧಿಕಾರ ನಿರ್ಧಾರವನ್ನು ವಾಪಸ್​​ ಪಡೆಯಬೇಕು. ಇದು ಒಂದು ದಿನಕ್ಕೆ ಮುಗಿಯುವ ಪ್ರತಿಭಟನೆ ಅಲ್ಲ. ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ಮುಂದಿಟ್ಟುಕೊಂಡು ಪ್ರತಿಭಟನೆಯನ್ನು ಹತ್ತಿಕ್ಕುತ್ತಿದೆ. ಸರ್ಕಾರ ತನ್ನನ್ನು ಯಾರೂ ಪ್ರಶ್ನೆ ಮಾಡಬಾರದು ಎನ್ನುವ ರೀತಿ ವರ್ತಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.