ಕರ್ನಾಟಕ ಬಂದ್: ಚಿತ್ರದುರ್ಗ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ - ಎಪಿಎಂಸಿ ಕಾಯ್ದೆ ತಿದ್ದುಪಡಿ ಸುದ್ದಿ
🎬 Watch Now: Feature Video
ರೈತ ವಿರೋಧಿ ಮಸೂದೆ ಹಿಂಪಡೆಯುವಂತೆ ಕರೆ ನೀಡಿರುವ ಕರ್ನಾಟಕ ಬಂದ್ ಬಿಸಿ ಚಿತ್ರದುರ್ಗಕ್ಕೂ ತಟ್ಟಿದೆ. ವಿವಿಧ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಸಿಐಟಿಯು, ಸಿಪಿಐ, ಸೇರಿದಂತೆ ದಲಿತಪರ ಸಂಘಟನೆಗಳು ಭಾಗಿಯಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ನಗರದ ಗಾಂಧಿ ವೃತ್ತದಲ್ಲಿ ಸೇರಿದ ಸಂಘಟನೆಗಳ ಸದಸ್ಯರು, ಕೇಂದ್ರ ಸರ್ಕಾರಕ್ಕೆ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿದರು. ಪ್ರತಿದಿನ ರಸ್ತೆಗಿಳಿಯುತ್ತಿದ್ದ ಆಟೋ, ಬಸ್, ಇತ್ಯಾದಿ ವಾಹನಗಳಲ್ಲಿದೆ ನಗರ ಬಿಕೋ ಎನ್ನುತ್ತಿದ್ದು, ಅಂಗಡಿ ಮುಂಗಟ್ಟುಗಳನ್ನು ಕೂಡ ಬಂದ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.